ಮನೆಯಲ್ಲಿ ಸಂಮೃದ್ಧಿ ಹೆಚ್ಚಿಸಲು ಅನುಸರಿಸಬೇಕಾಗದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.
ಮನೆಯ ಮುಖ್ಯ ದ್ವಾರ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ. ಅಷ್ಟು ಮಾತ್ರವೇ ಅಲ್ಲ ಬೇರೆ ಯಾರು ಸಹ ಹೊಸ್ತಿಲ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ.
ಸಂಜೆ ದೀಪ ಹೊತ್ತಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ. ರಾತ್ತಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ ಹಾಕಬೇಡಿ. ಒಂದು ಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.
ಪೊರಕೆಯ ತುದಿಯ ಭಾಗ (ಕಸ ಗುಡಿಸುವ ಭಾಗ) ವನ್ನು ಮೇಲೆ ಮಾಡಿ ನಿಲ್ಲಿಸಬೇಡಿ ಅದು ಸ್ಮಶಾನ ಮನೆಯ ಸೂಚಕವಾಗಿದೆ. ಆದ್ದರಿಂದ ಹಾಗೆ ಇಡುವುದು ಸತ್ತವರ ಮನೆಯಲ್ಲಿ ಮಾತ್ರ.
ಮೊರ, ಪೊರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿಯಬೇಡಿ ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೆ ಪೊರಕೆಗೆ ನಮಸ್ಕರಿಸಿ.
ಚಪ್ಪಲಿಗಳನ್ನು ಮನೆಯ ಹೊಸ್ತಿಲು ಮತ್ತು ಮುಖ್ಯದ್ವಾರದ ಎದುರಿಗೆ ಅಥವಾ ಬಳಿ ಬಿಡಬೇಡಿ. ಪಕ್ಕದಲ್ಲಿ ಸ್ವಲ್ಪ ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು.
ರಂಗೋಲಿ ಹಾಕದೆ ಹಾಗೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ. ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರೂ ಹಾಕಿ.
ಮನೆಯ ಗೋಡೆಯ ಮೇಲೆ, ದೇವರ ಮನೆ ಮುಂತಾದ ಸ್ಥಳಗಳಲ್ಲಿ ಗೋಡೆಗಳ ಮೇಲೆ ಶಾಯಿ ಅಥವಾ ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.
ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು ಓಡಾಡಬೇಡಿ. ಕಾಲಿನ ಪಾದವನ್ನು ಎತ್ತಿ ಇಟ್ಟು ನಡೆಯಬೇಕು. ಸಾಧ್ಯವಾದಷ್ಟು ಶಬ್ಧ ಕಡಿಮೆ ಇರಲಿ. ಹೆಣ್ಣು ಮಕ್ಕಳು ಕಾಳಿಗೆ ಕಾಲ್ಗೆಜ್ಜೆಯನ್ನು ಧರಿಸುವುದು ಒಳ್ಳೆಯದು.
ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ಧಗಳಿಂದ ಬಯ್ಯಬೇಡಿ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳು ಅವಾಚ್ಯ ಶಬ್ದಗಳಿಂದ ಬಯ್ಯಲುಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.
ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ. ಒಂದು ವೇಳೆ ನೀವೇನಾದರೂ ಧರಿಸಿದರೆ ಮಾಟ ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಪರಿಣಾಮ ಬೇಗ ಆಗುತ್ತದೆ.
ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರ್ಯದ ಸಂಕೇತವಾಗಿದೆ.
ಉಗುರುಗಳನ್ನು ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ ಹಾಗೇ ಶುಕ್ರವಾರ, ಮಂಗಳವಾರ ಹಾಗೂ ಶನಿವಾರದ ದಿನ ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಎಸೆಯಬಾರದು.
ಹಾಲನ್ನು ಚೆಲ್ಲಿದರೆ ತುಳಿದುಕೊಂಡು ಓಡಾಡಬೇಡಿ ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು.
ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು, ಕುಂಕುಮವಿಲ್ಲದ ಹಣೆ, ಕೆದರಿದ ಕೂದಲಿ ಅರಿಶಿನ ಹಚ್ಚದ ಕೈಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ.
ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.
ಹಾಸಿಗೆ, ಸೋಫಾ, ಮಂಚದ ಮೇಲೆ ಕುಳಿತು ಧ್ಯಾನ ಪೂಜೆಗಳನ್ನು ಮಾಡಬೇಡಿ ಅಂತಹವು ಯಾವು ಫಲವನ್ನು ನೀಡುವುದಿಲ್ಲ.
ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ಮಾಡಿಕೊಳ್ಳಿ. ಮುಸ್ಸಂಜೆ ವೇಳೆ ಮತ್ತು ಸೂರ್ಯೋದಯದ ಸಮಯದಲ್ಲಿ ಮಲಗಬೇಡಿ ಹಾಗೇ ಮಾಡಿದರೆ ಅದು ದರಿದ್ರ ಲಕ್ಷ್ಮಿ ಮನೆಯಲ್ಲಿ ತಾಂಡವವಾಡುತ್ತಾಳೆ. ಕರ್ಮ ಅಂದರೆ ಬೇರೇನೂ ಅಲ್ಲ. ನಾವು ಮಾಡಿದ ತಪ್ಪು-ಸರಿಗಳನ್ನು ಅನುಭವಿಸುವುದು.